ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚ್ಚಿಲ್‌ನ ಗಡಿ ನಿಯಂತ್ರಣ ರೇಖೆಯಲ್ಲಿ (LOC) ಒಳ ನುಸುಳುವಿಕೆ ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನಾ ಪಡೆ ಗುರುವಾರ ಎನ್‌ಕೌಂಟರ್ ಮಾಡಿದೆ.
ಭಾರತೀಯ ಸೇನೆ, (ಜಮ್ಮು ಮತ್ತು ಕಾಶ್ಮೀರ ಪೊಲೀಸ್) ಮತ್ತು ಗುಪ್ತಚರ ಸಂಸ್ಥೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ಕುಪ್ವಾರಾ ವಲಯದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಎಚ್ಚರಿಕೆಯ ಪಡೆಗಳು ಒಳ ನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದೆ. ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಆಫ್ ದಿ. ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸ್ ವಕ್ತಾರರು ಎಕ್ಸ್ನಲ್ಲಿ ಪೋಸ್ಟ್ ಮಾಡಿ ತಿಳಿಸಿದ್ದಾರೆ.
‘ಕುಪ್ವಾರಾ ಪೊಲೀಸರು ನೀಡಿದ ನಿರ್ದಿಷ್ಟ ಮಾಹಿತಿಯ ಆಧಾರದ ಮೇರೆಗೆ ಮಚ್ಚಲ್ ಸೆಕ್ಟರ್‌ನಲ್ಲಿ ಎನ್‌ಕೌಂಟರ್ ನಡೆದಿದೆ. ಇದುವರೆಗೆ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಕಾರ್ಯಾಚರಣೆ ಮುಂದುವರೆದಿದೆ’ ಎಂದು ಪೊಲೀಸ್ ವಕ್ತಾರರು ಮಾಹಿತಿ ನೀಡಿದ್ದಾರೆ.