Friday, December 26, 2025

ಸಿರಿಯಾದ ಮಸೀದಿಯಲ್ಲಿ ಬಾಂಬ್ ಬ್ಲಾಸ್ಟ್: 8 ಮಂದಿ ಸಾವು, ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯ ಸಿರಿಯಾದ ಹೋಮ್ಸ್ ನಗರದಲ್ಲಿ ಮಸೀದಿಯಲ್ಲಿ ಪ್ರಾರ್ಥನೆ ನಡೆಯುತ್ತಿದ್ದ ವೇಳೆಯಲ್ಲಿ ಸ್ಫೋಟ ಸಂಭವಿಸಿದೆ. ಇಮಾಮ್ ಅಲಿ ಬಿನ್ ಅಬಿ ತಾಲಿಬ್ ಮಸೀದಿಯಲ್ಲಿ ನಡೆದ ಈ ಘಟನೆಯಲ್ಲಿ ಕನಿಷ್ಠ 8 ಮಂದಿ ಪ್ರಾಣ ಕಳೆದುಕೊಂಡಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ಸರ್ಕಾರಿ ನಿಯಂತ್ರಣದಲ್ಲಿರುವ ವಾಡಿ ಅಲ್-ದಹಾಬ್ ಪ್ರದೇಶದಲ್ಲಿನ ಮಸೀದಿಯೊಳಗೆ ಸ್ಫೋಟ ಸಂಭವಿಸಿದ್ದು, ಪ್ರಾರ್ಥನೆಗೆ ಸೇರಿದ್ದ ಜನರಲ್ಲಿ ಗೊಂದಲ ಮತ್ತು ಭೀತಿ ಆವರಿಸಿದೆ. ಸ್ಫೋಟದ ತೀವ್ರತೆಯಿಂದ ಮಸೀದಿಯ ಒಳಭಾಗಕ್ಕೆ ಹಾನಿಯಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಇದನ್ನೂ ಓದಿ:

ಘಟನೆ ಕುರಿತು ತಿಳಿಯುತ್ತಿದ್ದಂತೆಯೇ ತುರ್ತು ಸೇವಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡವು. ಭದ್ರತಾ ಪಡೆಗಳು ಮಸೀದಿ ಸುತ್ತಮುತ್ತಲಿನ ಪ್ರದೇಶವನ್ನು ಸುತ್ತುವರೆದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿವೆ.

error: Content is protected !!