Friday, December 26, 2025

ಮೈಸೂರಿನ ಖ್ಯಾತ ಶಿಲ್ಪಿ ʼಕೈʼಚಳಕ, ಶಾಮನೂರು ಶಿವಶಂಕರಪ್ಪ ಪುತ್ಥಳಿ ಹೇಗಿದೆ ನೋಡಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡುವ ಮೂಲಕ ಇಡೀ ದೇಶದ ಗಮನವನ್ನು ಸೆಳೆದಿರುವ ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್​​ ಅವರು, ಕಾಂಗ್ರೆಸ್​​ನ ಹಿರಿಯ ಮುತ್ಸದ್ದಿ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ದಿ.ಶಾಮನೂರು ಶಿವಶಂಕರಪ್ಪ ಪುತ್ಥಳಿ ಕೆತ್ತನೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.

ದಾವಣಗೆರೆ ನಗರದ ಆನೆಕೊಂಡದ ಕಲ್ಲೇಶ್ವರ ರೈಸ್ ಮಿಲ್ ಆವರಣದ ನೂರು ಎಕರೆ ಪ್ರದೇಶದಲ್ಲಿ ಶುಕ್ರವಾರದಲ್ಲಿ ನಡೆದ ದಿ.ಶಾಮನೂರು ಶಿವಶಂಕರಪ್ಪ ನುಡಿ ನಮನ ಕಾರ್ಯಕ್ರಮದಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತನೆಯ ಪುತ್ಥಳಿಯನ್ನು ಗಣ್ಯರು ಅನಾವರಣಗೊಳಿಸಿದ್ದಾರೆ.

error: Content is protected !!