ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ಗೆ ಜಾಮೀನು ಮಂಜೂರಾಗಿದೆ.
ಕಳೆದ ಭಾನುವಾರ ತಡರಾತ್ರಿ ಬಿಗ್ಬಾಸ್ ರಿಯಾಲಿಟಿ ಶೋ ಸೆಟ್ನಿಂದಲೇ ವರ್ತೂರು ಸಂತೋಷ್ರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರು.
ಎರಡನೇ ಎಸಿಜೆಎಂ ಕೋರ್ಟ್ನಿಂದ ಜಾಮೀನು ಮಂಜೂರಾಗಿದ್ದು, ನಾಲ್ಕು ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರು ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿ ನ್ಯಾಯಾಲಯ ಜಾಮೀನು ನೀಡಿದೆ.