ಏಷ್ಯನ್ ಪ್ಯಾರಾ ಗೇಮ್ಸ್‌: 100 ಪದಕ ಗೆದ್ದು ಇತಿಹಾಸ ಬರೆದ ಭಾರತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತೀಯ ಸ್ಪರ್ಧಿಗಳು ಉತ್ತಮ ಸಾಧನೆ ಮಾಡಿದ್ದು, ಇಂದಿಗೆ ಭಾರತಕ್ಕೆ 100 ಪದಕಗಳು ಲಭಿಸಿವೆ. ಈ ಮೂಲಕ ಭಾರತ ಇತಿಹಾಸ ನಿರ್ಮಿಸಿದೆ.

ಹಾಂಗ್‌ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ದಿಲೀಪ್ ಮಹಾದು ಗವಿತ್ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತವು 100ನೇ ಪದಕವನ್ನು ಬಾಚಿಕೊಂಡಿದೆ. ಪುರುಷರ 400 ಮೀಟರ್ ಟಿ47 ಸ್ಪರ್ಧೆಯಲ್ಲಿ ಗವಿತ್ ಚಿನ್ನದ ಪದಕ ಗೆದ್ದಿದ್ದಾರೆ.

ಮೊದಲ ಬಾರಿಗೆ ಭಾರತೀಯ ಪ್ಯಾರಾ ತಂಡವು 100 ಪದಕಗಳನ್ನು ಗೆದ್ದಿದೆ, ಇದು ಈವರೆಗಿನ ಅತ್ಯಂತ ಯಶಸ್ವಿ ಪ್ಯಾರಾ ಏಷ್ಯನ್ ಗೇಮ್ಸ್ ಅಭಿಯಾನವಾಗಿದೆ.

2018ರ ಏಷ್ಯನ್ ಪ್ಯಾರಾ ಗೇಮ್ಸ್‌ಗೆ ಭಾರತವು 190 ಕ್ರೀಡಾಪಟುಗಳನ್ನು ಕಳುಹಿಸಿತ್ತು. 15 ಚಿನ್ನ ಸೇರಿದಂತೆ 72 ಪದಕಗಳನ್ನು ಗೆದ್ದುಕೊಂಡಿತ್ತು.

ಭಾರತದ ಐತಿಹಾಸಿಕ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದು, ಈ ಗೆಲುವು ಎಲ್ಲರಿಗೂ ಸ್ಫೂರ್ತಿಯಾಗಲಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!