‘ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮಕ್ಕೆ ತೆರಳಿದ ರಾಜ್ಯ ತಂಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರು: ದೆಹಲಿಯಲ್ಲಿ ನಡೆಯಲಿರುವ “ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮಕ್ಕೆ ಪಕ್ಷದ ಪ್ರತಿನಿಧಿಗಳು ಬೆಂಗಳೂರಿನ ಬೈಯಪ್ಪನಹಳ್ಳಿಯ ವಿಶ್ವೇಶ್ವರಯ್ಯ ಟರ್ಮಿನಲ್‍ನಿಂದ ಇಂದು ಸಂಜೆ ತೆರಳಿದರು.

ರಾಜ್ಯದ ವಿವಿಧ ಪುಣ್ಯ ಕ್ಷೇತ್ರಗಳೂ ಸೇರಿದಂತೆ ವಿವಿಧೆಡೆಯಿಂದ ಸಂಗ್ರಹಿಸಿದ ಮಣ್ಣಿನ ಅಮೃತ ಕಲಶಗಳೊಂದಿಗೆ ಇಲ್ಲಿನ ಪ್ರತಿನಿಧಿಗಳು ತೆರಳಿದರು.

ಕೇಂದ್ರದ ಸಚಿವ ರಾಜೀವ್ ಚಂದ್ರಶೇಖರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಭಾಗವಹಿಸಿ ದೆಹಲಿಗೆ ತೆರಳುವ ಪ್ರತಿನಿಧಿಗಳಿಗೆ ಶುಭ ಹಾರೈಸಿದರು. ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಈ ಪ್ರತಿನಿಧಿಗಳನ್ನು ಬೀಳ್ಕೊಡಲಾಯಿತು.
ಹುತಾತ್ಮರ ಗೌರವಾರ್ಥ ಕರ್ತವ್ಯಪಥದಲ್ಲಿ ನಿರ್ಮಾಣವಾಗುವ ಅಮೃತ ಉದ್ಯಾನ ಸ್ಥಳಕ್ಕೆ ನಮ್ಮ ರಾಜ್ಯದಿಂದ ಸಂಗ್ರಹಿಸಿದ ಮಣ್ಣಿನ ಅಮೃತ ಕಳಸವನ್ನು ದೆಹಲಿಗೆ ಇದೇ 30ರಂದು ಈ ಪ್ರತಿನಿಧಿಗಳು ತಲುಪಿಸುವರು. ರಾಜ್ಯದಲ್ಲಿ ಕಳೆದ ಎರಡು ತಿಂಗಳುಗಳಿಂದ ಈ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನ ನಡೆದಿದ್ದು, ಪ್ರತಿ ಮನೆ, ಧಾರ್ಮಿಕ ಕೇಂದ್ರಗಳು, ವೀರ ಯೋಧರ ಮನೆ, ಸ್ವಾತಂತ್ರ್ಯ ಹೋರಾಟಗಾರರ ಮನೆ, ಮಹಾಪುರುಷರ ಸ್ಮಾರಕ ಸ್ಥಳ, ಸಾಧು ಸಂತರ ಮಠಗಳಿಂದ ಪುಣ್ಯ ಮಣ್ಣನ್ನು ಸಂಗ್ರಹಿಸಲಾಗಿತ್ತು. ಅಮೃತ ವನದಲ್ಲಿ ಮಣ್ಣನ್ನು ವಿಲೀನಗೊಳಿಸಲಾಗುವುದು ಎಂದು ಮುಖಂಡರು ತಿಳಿಸಿದರು.

ದೆಹಲಿಯಲ್ಲಿ ಇದೇ 31ರಂದು ಒಂದು ಲಕ್ಷಕ್ಕೂ ಹೆಚ್ಚು ಯುವಕರು ಸೇರಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಿದ್ದಾರೆ. ರಾಜ್ಯದ 580 ಯುವಕರು, ನೆಹರೂ ಯುವಕ ಕೇಂದ್ರದಿಂದ 1500 ಯುವಕರು ಸೇರಿ ಒಂದೇ ರೈಲಿನಲ್ಲಿ ದೆಹಲಿಗೆ ತೆರಳುತ್ತಿದ್ದಾರೆ ಎಂದು ವಿವರ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!