ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ಪುರುಷರ ಏಕದಿನ ವಿಶ್ವಕಪ್ 2023ರ 29ನೇ ಪಂದ್ಯದಲ್ಲಿ ಇಂದು ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.
ಲಖನೌದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ರೋಚಕ ಪಂದ್ಯ ನಡೆಯಲಿದ್ದು, ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಜೋಸ್ ಬಬ್ಲರ್ ನೇತೃತ್ವದ ಇಂಗ್ಲೆಂಡ್ ತಂಡಗಳು ಸೆಣೆಸಾಟ ನಡೆಸಲಿವೆ.
ಭಾರತ – ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯವು ಇಂದು ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಮಧ್ಯಾಹ್ನ 1.30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.