ಕೇರಳದಲ್ಲಿ ಸರಣಿ ಸ್ಫೋಟ: ನಾಳೆ ಸರ್ವಪಕ್ಷ ಸಭೆ ಕರೆದ ಸಿಎಂ ಪಿಣರಾಯಿ ವಿಜಯನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌‌

ಕೇರಳದ ಎರ್ನಾಕುಲಂ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಸಂಭವಿಸಿದ ಸರಣಿ ಸ್ಫೋಟ ಸಂಬಂಧಿಸಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದೆ.

ಈ ಘಟನೆಯ ಬೆನ್ನಲ್ಲೇ ಸಿಎಂ ಪಿಣರಾಯಿ ವಿಜಯನ್ ನಾಳೆ ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ.

ಈ ಕುರಿತಂತೆ ಕೇರಳ ಸಿಎಂ ಕಚೇರಿಯಿಂದ ಮಾಹಿತಿ ನೀಡಲಾಗಿದ್ದು, ಕೇರಳದ ಕಲಮಸ್ಸೆರಿ ಸ್ಫೋಟ ಪ್ರಕರಣ ಸಂಬಂಧ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸರ್ವಪಕ್ಷ ಸಭೆ ಕರೆದಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಸಚಿವಾಲಯದ ಮುಖ್ಯಮಂತ್ರಿಗಳ ಕಾನ್ಫರೆನ್ಸ್ ಹಾಲ್ ನಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!