ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 14 ಜಿಲ್ಲಾ ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಕಾನೂನಿನಲ್ಲಿ ಪದವಿ, ಎಲ್ಎಲ್ಬಿ ಜೊತೆಗೆ ನವೆಂಬರ್ 17, 2023ರ ಅನ್ವಯ ಗರಿಷ್ಠ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,44,840/- ರಿಂದ 1,94,660/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಸಕ್ತರು ಆನ್‌ಲೈನ್ ಮೂಲಕ ನವೆಂಬರ್ 17,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.