ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಮತ್ತೊಂದು ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಬೆಳ್ಳಂಬೆಳಗ್ಗೆ ದಾಳಿ ನಡೆದಿದೆ.
ಒಟ್ಟಾರೆ 90 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ದಾಳಿ ನಡೆಯುತ್ತಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.
ಬೆಂಗಳೂರು, ಕಲಬುರಗಿ, ಚಿತ್ರದುರ್ಗ, ರಾಯಚೂರು, ಹಾಸನ, ಬೀದರ್ ಹಾಗೂ ದೇವದುರ್ಗದ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಏಕಕಾಲಕ್ಕೆ 11 ಏರಿಯಾಗಳಲ್ಲಿ ದಾಳಿ ನಡೆಸಲಾಗಿದೆ.