ದೆಹಲಿ ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಈ ಆದೇಶವನ್ನು ಹೊರಡಿಸಿದೆ. ಅಲ್ಲದೇ ಪ್ರಕರಣದ ವಿಚಾರಣೆಯನ್ನು ಆರರಿಂದ ಎಂಟು ತಿಂಗಳಲ್ಲಿ ಪೂರ್ಣಗೊಳಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಒಂದು ವೇಳೆ ಈ ಪ್ರಕರಣದ ವಿಚಾರಣೆ ವಿಳಂಬವಾದರೆ, ಸಿಸೋಡಿಯಾ ಮೂರು ತಿಂಗಳ ನಂತರ ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಾಲಯ ಹೇಳಿದೆ.

ಜಾಮೀನು ನಿರಾಕರಿಸಿದ ನ್ಯಾಯಾಲಯವು, ತಾತ್ಕಾಲಿಕವಾಗಿ ಸ್ಥಾಪಿಸಲಾದ 338 ಕೋಟಿ ರೂ.ಗಳ ಹಣದ ಜಾಡು ವರ್ಗಾವಣೆಗೆ ಸಂಬಂಧಿಸಿದ ಅಂಶಗಳನ್ನು ಗಮನಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಮತ್ತು ಇಡಿ ಪ್ರಕರಣಗಳಲ್ಲಿ ಜಾಮೀನು ಕೋರಿ ಮನೀಶ್ ಸಿಸೋಡಿಯಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ನ್ಯಾಯಾಲಯವು ಮತ್ತೊಮ್ಮೆ ಜಾಮೀನು ನಿರಾಕರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!