ಹೊಸದಿಗಂತ ವರದಿ ಕಲಬುರಗಿ:
ಮಹಾರಾಷ್ಟ್ರದಲ್ಲಿ ಮೀಸಲಾತಿ ಸಂಬಂಧ ಹೋರಾಟ ನಡೆಯುತ್ತಿದ್ದು, ಸೋಮವಾರ ಕಾರ್ಯಚರಣೆಯಲ್ಲಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಕೆಆರ್‌ಟಿಸಿ) ಬಸ್ಸಿಗೆ ಬೆಂಕಿ ಹಚ್ಚಿದ ಪರಿಣಾಮ ಅಂತರ ರಾಜ್ಯ ಬಸ್ ಕಾರ್ಯಾಚರಣೆಯನ್ನು ತಾತ್ಮಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆ.ಕೆ.ಆರ್.ಟಿ.ಸಿ ವ್ಯವಸ್ಥಾಪಕ ಎಂ.ರಾಚಪ್ಪ ತಿಳಿಸಿದ್ದಾರೆ
ಸೋಮವಾರ ಬೀದರ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಬಸ್ ಸಂಖ್ಯೆ ಕೆ.ಎ-38 ಎಫ್-1201 ಬಸ್ ಅನ್ನು, ಮಹಾರಾಷ್ಟ್ರದ ಉಮರ್ಗಾ ಬಳಿಯ ತರುರಿ ಗ್ರಾಮದಲ್ಲಿ ಪ್ರತಿಭಟನಾಕಾರರು ತಡೆದು ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಸಿಗೆ ಬೆಂಕಿ ಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ತುಳಜಾಪುರ ಯಾತ್ರೆ ಸೇರಿದಂತೆ ಮಹಾರಾಷ್ಟ್ರಕ್ಕೆ ಅಂತರಾಜ್ಯ ಕಾರ್ಯಾಚರಣೆಯನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಸ್ಥಳೀಯ ಪೊಲೀಸರ ನೆರವಿನಿಂದ ಬಸ್‌ನಲ್ಲಿದ್ದ 39 ಪ್ರಯಾಣಿಕರನ್ನು ಸುರಕ್ಷಿತವಾಗಿ ಅವರ ತಲುಪುವ ಸ್ಥಳಕ್ಕೆ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಮಹಾರಾಷ್ಟ್ರದಲ್ಲಿ ಕಾರ್ಯಚರಣೆಯಲ್ಲಿರುವ ಕರ್ನಾಟಕ ರಾಜ್ಯದ ಬಸ್‌ಗಳನ್ನು ಹತ್ತಿರ ಪೊಲೀಸ್ ಠಾಣೆ, ಬಸ್ ಡೀಪೋ ಗಳಲ್ಲಿ ಪಾರ್ಕ್ ಮಾಡಲು ಸಂಸ್ಥೆ ಸಿಬ್ಬಂದಿಗೆ ನಿರ್ದೇಶನ ನೀಡಲಾಗಿದೆ ಎಂದರು.