ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರುನಾಡಿನಾದ್ಯಂತ ಕನ್ನಡ ರಾಜ್ಯೋತ್ಸವದ ಕಂಪು ಪಸರಿಸಿದೆ. ಅಂತೆಯೇ ರಾಜ್ಯ ರಾಜಧಾನಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ನಾಡಗೀತೆಯ ಮೂಲಕ ಕನ್ನಡಾಂಬೆಗೆ ನುಡಿನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಡಿಸಿಎಂ ಡಿಕೆಶಿ, ಸಚಿವರಾದ ಎನ್​.ಚಲುವರಾಯಸ್ವಾಮಿ, ಮಧು ಬಂಗಾರಪ್ಪ, ಶಾಸಕ ಆರ್​. ವಿ.ದೇಶಪಾಂಡೆ​, ರಿಜ್ವಾನ್‌ ಹರ್ಷದ್‌ ಸೇರಿದಂತೆ ಹಲವು ಗಣ್ಯರು ಹಾಜರಾಗಿದ್ದರು.

ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳಿಂದ ಪಥಸಂಚಲನ ಕಾರ್ಯಕ್ರಮ ನಡೆಯುತ್ತಿದ್ದು, ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ಎಲ್ಲೆಲ್ಲೂ ಕನ್ನಡದ ಬಾವುಟ ರಾರಾಜಿಸುತ್ತಿದೆ. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಭ್ರಮದ ಮೆರುಗನ್ನು ಹೆಚ್ಚಿಸಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!