ಬಾಗಲಕೋಟೆಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ, ಸಚಿವರಿಂದ ಧ್ವಜಾರೋಹಣ

ಹೊಸದಿಗಂತ ವರದಿ ಬಾಗಲಕೋಟೆ:

ಜಿಲ್ಲಾಡಳಿತ ವತಿಯಿಂದ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಧ್ವಜಾರೋಹಣ ನೆರವೇರಿಸಿದ ಪರೇಡ್ ವೀಕ್ಷಿಸಿದರು.

ನಂತರ ಕಾರ್ಯಕ್ರಮ‌ ಉದ್ದೇಶಿಸಿ ಮಾತನಾಡಿದ ಸಚಿವರು, ʻಕನ್ನಡ ನಾಡಿನಲ್ಲಿ ಮಾತೃಭಾಷೆ ಕನ್ನಡಕ್ಕೆ ಪ್ರಥಮ ಆಧ್ಯತೆ ಎಂಬ ನೀತಿಯನ್ನು ನಮ್ಮ ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೊಳಿಸಿ ಇದಕ್ಕೆ ಪೂರಕವಾಗಿ ಎಲ್ಲಾ ಹಂತದಲ್ಲಿ ಕನ್ನಡದ ಅನುಷ್ಠಾನಕ್ಕೆ ಮುಂದಾಗಿದೆ ಎಂದರು.

ಬಾಗಲಕೋಟೆ ಜಿಲ್ಲೆಯಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕತಿ ವಿಕಾಸಕ್ಕೆ ಸರ್ಕಾರ ವಿಶೇಷ ಗಮನಹರಿಸಿ ಬೇಕಾದ ಎಲ್ಲಾ ಸೌಲಭ್ಯ ಒದಗಿಸಲಾಗುತ್ತದೆ. ಇಲ್ಲಿನ ಸಂಸ್ಕೃತಿಗೆ ಧಕ್ಕೆಯಾಗದಂತೆ ಕನ್ನಡ ಭಾಷೆಯ ಸದೃಢವಾಗಿ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಸಂಸದ ಪಿ.ಸಿ.ಗದ್ದಿಗೌಡರ,ಶಾಸಕ ಎಚ್.ವೈ.ಮೇಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಸಿಇಓ‌ ಶಶಿಧರ ಕುರೇರ,ಎಸ್ಪಿ ಅಮರನಾಥರೆಡ್ಡಿ , ಉಪವಿಭಾಗಾಧಿಕಾರಿ ಶ್ವೇತಾ ಬೀಡ್ಕರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಗಮನಸೆಳೆದ ಸ್ತಬ್ಧಚಿತ್ರ :

ಕನ್ನಡ ರಾಜ್ಯೋತ್ಸವ ನಿಮಿತ್ತ ಸರ್ಕಾರಿ ಇಲಾಖೆಗಳ ಸ್ತಬ್ಧ ಚಿತ್ರ ಗಮನಸೆಳೆಯಿತು. ಕೆಎಸ್ಆರ್ಟಿಸಿ ವತಿಯಿಂದ ಸಾರಿಗೆ ಇಲಾಖೆ‌ ಬಸ್ ರೂಪಕ, ದೇವಿಯ‌ವೇಷ, ಅರಣ್ಯ ಇಲಾಖೆಯ ಪರಿಸರ‌ ಜಾಗೃತಿ, ರೇಷ್ಮೆ ಇಲಾಖೆ ಸೇರಿದಂತೆ‌‌ ವಿವಿಧ ಇಲಾಖೆ ಸ್ತಬ್ಧಚಿತ್ರ ನೋಡಗರ ಗಮನಸೆಳೆಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!