ಹೊಸದಿಗಂತ ವರದಿ ಮಡಿಕೇರಿ:
ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಕೆರೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುಂಟಿಕೊಪ್ಪ ಸಮೀಪದ ಸೆವೆಂತ್ ಮೈಲ್ ನಿವಾಸಿ ಪೌಲ್ ಡಿಸೋಜ ಎಂಬವರು ಭಾನುವಾರ ಮನೆಯಿಂದ ಕಾಣೆಯಾಗಿದ್ದರು. ಅವರು ಎಲ್ಲಿಯೂ ಕಂಡುಬಾರದ ಹಿನ್ನೆಲೆ ಮನೆಯವರು ಪೊಲೀಸ್ ದೂರು ದಾಖಲಿಸಿ ಎಲ್ಲಾ ಕಡೆ ಹುಡುಕಾಟ ನಡೆಸಿದ್ದರು.
ಆದರೆ ಗುರುವಾರ ಬೆಳಗ್ಗೆ ಅಲ್ಲಿನ ಸೌಭಾಗ್ಯ ತೋಟದ ಕೆರೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಪೌಲ್ ಡಿಸೋಜ ಅವರ ದೇಹದಲ್ಲಿ ಕಲ್ಲುಗಳು ಕಟ್ಟಿಕೊಂಡಿರುವುದು ಗೋಚರಿಸಿದ್ದು, ಹೀಗಾಗಿ ಅವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.