ಹೊಸದಿಗಂತ ವರದಿ, ಕೊಪ್ಪಳ:
ರಾಜ್ಯಸರ್ಕಾರ ಕುಡಿಯುವ ನೀರಿನ ಬವಣೆ ನೀಗಿಸಲು 900 ಕೋಟಿ ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗಿಣಿಗೇರಾ ಏರ್ಸ್ಟ್ರೀಪ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಅನುದಾನ ನೀಡಿದ್ದು, ಹೆಚ್ಚಿನ ಮೊತ್ತಕ್ಕೆ ಬೇಡಿಕೆ ಸಲ್ಲಿಸಿದ್ದಲ್ಲಿ, ಸರ್ಕಾರ ತಕ್ಷಣ ಅನುದಾನ ಒದಗಿಸಲಿದೆ ಎಂದರು.