ಹೊಸದಿಗಂತ ವರದಿ,ಕೊಪ್ಪಳ:
ಮುನಿರಾಬಾದ್ ನಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮುನಿರಾಬಾದ್ ಗ್ರಾಪಂ ಆಡಳಿತದಿಂದ ನವೆಂಬರ್ 02ರಂದು ರಾತ್ರಿ 8 ಗಂಟೆಗೆ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.
ಎನ್ ಹೆಚ್ 50 ರ ಬಳಿಯ ಮುನಿರಾಬಾದ್ ಗ್ರಾಮದ ಹತ್ತಿರದಲ್ಲಿ ನಡೆದ ಸಮಾರಂಭದಲ್ಲಿ ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ಜನಾರ್ಧನ ರೆಡ್ಡಿ,
ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಪಂ ಸಿಇಓ ರಾಹುಲ್ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಇದ್ದರು.