ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದಲ್ಲಿ ಭೀಕರ ಅಗ್ನಿ ಅವಘಡ: 27 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 27 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಇರಾನ್‌ನಲ್ಲಿ ನಡೆದಿದೆ.

ರಾಜಧಾನಿ ಟೆಹ್ರಾನ್‌ನ ವಾಯುವ್ಯಕ್ಕೆ 200 ಕಿಲೋಮೀಟರ್ ದೂರದಲ್ಲಿರುವ ಲ್ಯಾಂಗ್ರೌಡ್ ನಗರದಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಹದಿನೇಳು ಮಂದಿ ಗಾಯಗೊಂಡಿದ್ದಾರೆ.

ಇಂದು ಮುಂಜಾನೆ ಖಾಸಗಿ ಪುನರ್ವಸತಿ ಕೇಂದ್ರದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಬಾರೀ ಪ್ರಮಾಣದಲ್ಲಿ ಹೊಗೆ ಕಾಣಿಸಿಕೊಂಡಿದೆ.
ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳವು ದೌಡಾಯಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ.

ಈ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಕುರಿತಾಗಿ ತನಿಖೆ ನಡೆಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!