ಹೊಸದಿಗಂತ ವರದಿ ಕೊಪ್ಪಳ:
ನ್ಯಾಯದಾನಕ್ಕೆ ಬಲ ತುಂಬಲು ನಮ್ಮ ಸರಕಾರ ಬದ್ದ. ಜನವರಿ 26ರ ವೇಳೆಗೆ ರಾಜ್ಯದಲ್ಲಿ ಗ್ರಾಮ ನ್ಯಾಯಲಯ ಸ್ಥಾಪನೆಗೆ ಸಿದ್ದತೆ ಮಾಡಲಾಗಿದೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ್ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯ ನ್ಯಾಯಾಧೀಶರೊಂದಿಗೆ ಚರ್ಚಿಸಿ ಅಂತಿಮ ರೂಪರೇಷ ನೀಡಲಾಗುವುದು. ನ್ಯಾಯಲಯಗಳಿಗೆ ಮೂಲಭೂತ ಸೌಲಭ್ಯ ನೀಡಲು ಆದ್ಯತೆ ಕಲ್ಪಿಸಲಾಗುವುದು ಎಂದು ತಿಳಿಸಿದರು.