ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಕಾರ್ಯಾಚರಣೆ ಕುರಿತಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಬುಲ್ಡೋಜರ್ ಕಾರ್ಯಾಚರಣೆಗೆ ಹೋಲಿಸಿದ ಬೆನ್ನಲ್ಲೇ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ಸಿಎಂ ಒಬ್ಬ ಕಮ್ಯೂನಿಸ್ಟ್. ಕೋಗಿಲು ಲೇಔಟ್ ನಲ್ಲಿ 2021-22ರಿಂದ ಅನಧಿಕೃತವಾಗಿ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದರು. ಅವರಿಗೆ ನೋಟಿಸ್ ಕೊಟ್ಟು ತೆರವು ಮಾಡಬೇಕು ಎಂದು ಹೇಳಿದ್ದೇವು. ಆದರೆ ಅಲ್ಲಿ ವಾಸಿಸುತ್ತಿದ್ದವರು ನಮ್ಮ ಮಾತನ್ನು ಕೇಳಲಿಲ್ಲ. ಹೀಗಾಗಿ ತೆರವು ಕಾರ್ಯಾಚರಣೆ ನಡೆಸಿ ಜಾಗವನ್ನು ಖಾಲಿ ಮಾಡಿಸಿದ್ದಾರೆ.
ಈ ಬಗ್ಗೆ ನಾನು ಜಿಬಿಎ ಕಮಿಷನರ್ ಹಾಗೂ ರಾಜ್ಯ ಕಾರ್ಯದರ್ಶಿ ಜೊತೆ ಮಾತನಾಡಿದ್ದೀನಿ. ಮನೆ ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಹೇಳಿದ್ದೇನೆ. ಅವರೆಲ್ಲಾ ವಲಸಿಗರಾದರೂ ಮಾನವೀಯತೆಯ ದೃಷ್ಟಿಯಿಂದ ಅವರಿಗೆ ಬೇರೆ ಕಡೆ ಮನೆ ಕಟ್ಟಿಕೊಳ್ಳಲು ಜಾಗ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

