ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ‘ಮುಖ್ಯಮಂತ್ರಿ’ ಹುದ್ದೆ ಕುರಿತು ರಾಜಕೀಯ ಚರ್ಚೆ ಜೋರಾಗಿದ್ದು, ನಾನೇ ೫ ವರ್ಷ ಸಿಎಂ ಎಂದಿದ್ದ ಸಿದ್ದರಾಮಯ್ಯ , ಇದೀಗ ಈ ಬಗ್ಗೆ ಹೈಕಮಾಂಡ್ ನಿರ್ಧಾರ ಅಂತಿಮ ಎಂದು ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಂದಿನ 5 ವರ್ಷ ನಾನೇ ಸಿಎಂ ಎಂಬ ಹೇಳಿಕೆಗೆ ಸ್ಪಷ್ಟನೆ ನೀಡಿದರು. ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ಹೈಕಮಾಂಡ್ ಏನು ಹೇಳುತ್ತೋ ನಾನು ಅದನ್ನು ಕೇಳುತ್ತೇನೆ ಎಂದರು.
ನಮ್ಮದು ರಾಷ್ಟ್ರೀಯ ಪಕ್ಷ. ಏನೇ ತೀರ್ಮಾನ ಮಾಡಿದರೂ ಅದು ಹೈಕಮಾಂಡ್ ಮಟ್ಟದಲ್ಲೇ ಆಗಬೇಕು. ಹೊಸದಾಗಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಕುರಿತೂ ಹೈಕಮಾಂಡ್ ತೀರ್ಮಾನಿಸಲಿದೆ ಎಂದರು.