ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭೂಕಂಪ: 3.6 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉತ್ತರಪ್ರದೇಶದ ಅಯೋ‍ಧ್ಯೆಯಲ್ಲಿ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆ ರಿಕ್ಟರ್‌ ಮಾಪಕದಲ್ಲಿ 3.6 ದಾಖಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು, ಭಾನುವಾರ ಮುಂಜಾನೆ 1 ಗಂಟೆಗೆ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.

ಕಂಪನ ಬಿಂದುವನ್ನು ಅಯೋಧ್ಯೆಯಿಂದ ಉತ್ತರಕ್ಕೆ 215 ಕಿ.ಮೀ ದೂರದಲ್ಲಿ 10 ಕಿ.ಮೀ ಆಳದಲ್ಲಿ ಗುರುತಿಸಲಾಗಿದೆ.

ಈ ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!