ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಪ್ರತಿಮಾ (37) ಕೊಲೆ ಪ್ರಕರಣದ ಕುರಿತು ತನಿಖೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾನತಾಡಿದ ಸಿಎಂ, ನನಗೆ ಈಗಷ್ಟೇ ಮಾಹಿತಿ ತಿಳಿಯಿತು. ಅವರು ಬೆಂಗಳೂರಿನಲ್ಲಿ ಕಳೆದ ಕೆಲವು ವರ್ಷಗಳಿಂದ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಅವರ ಕೊಲೆ ಹೇಗಾಯ್ತು, ಯಾಕಾಯ್ತು ಎಂದು ತನಿಖೆ ಮಾಡಿಸುತ್ತೇವೆ ಎಂದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿರುವ ಪ್ರತಿಮಾ ಅವರು ತೀರ್ಥಹಳ್ಳಿ ಮೂಲದವರು. ಪ್ರಸ್ತುತ ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರ ಬಳಿಕ ಕುವೆಂಪು ನಗರದಲ್ಲಿ ಬಾಡಿಗೆ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಕಳೆದ ರಾತ್ರಿ ಅವರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.