ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಪುಷ್ಪ 2’ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಕೋರ್ಟ್ಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ.
ಈ ಘಟನೆ ನಡೆದು ಒಂದು ವರ್ಷಗಳ ಬಳಿಕ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಎ11 ಆರೋಪಿ ಆಗಿ ಹೆಸರಿಸಲಾಗಿದೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದರೆ, ಅವರ ಮಗ ತೀವ್ರವಾಗಿ ಗಾಯಗೊಂಡಿದ್ದರು.
2024ರ ಡಿಸೆಂಬರ್ 04 ರಂದು ಅಲ್ಲು ಅರ್ಜುನ್ ತಮ್ಮ ಕುಟುಂಬದೊಂದಿಗೆ ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರಕ್ಕೆ ‘ಪುಷ್ಪ 2’ ಸಿನಿಮಾ ವೀಕ್ಷಿಸಲು ಆಗಮಿಸಿದ್ದರು. ಆಗ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಇದರಿಂದ ಉಂಟಾದ ಕಾಲ್ತುಳಿತದಲ್ಲಿ ಸಾಕಷ್ಟು ಹಾನಿ ಆಯಿತು.
ಅಲ್ಲು ಅರ್ಜುನ್ ಬಂದ ಕಾರಣದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರೆಂದು ಪೊಲೀಸರು ವಾದಿಸಿದರು. ಅವರನ್ನು ಬಂಧಿಸಿ ಒಂದು ದಿನ ಜೈಲಿನಲ್ಲೂ ಇಡಲಾಯಿತು ಈ ಘಟನೆ ನಡೆದು ಒಂದು ವರ್ಷ ಕಳೆದಿದೆ. ಈಗ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆ ಆಗಿದೆ.
ಚಿಕ್ಕಡಪಲ್ಲಿ ಪೊಲೀಸರು ಸಂಪೂರ್ಣವಾಗಿ ತನಿಖೆ ಮಾಡಿ ಚಾರ್ಜ್ಶೀಟ್ನಲ್ಲಿ ಸಲ್ಲಿಕೆ ಮಾಡಿದ್ದಾರೆ. ಸಂಧ್ಯಾ ಥಿಯೇಟರ್ ಮ್ಯಾನೇಜ್ಮೆಂಟ್ ಅನ್ನು ಎ1 ಆಗಿ ಪರಿಗಣಿಸಲಾಗಿದೆ. ಘಟನೆಗೆ ಕಾರಣವಾದ ಲೋಪಗಳಿಗೆ ಥಿಯೇಟರ್ನವರು ಮುಖ್ಯ ಹೊಣೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ.

