ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳಕೊಲ್ಲಿಯಲ್ಲಿ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.2 ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು, ಇಂದು ಮುಂಜಾನೆ 5:32ಕ್ಕೆ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.
ಕಂಪನ ಬಿಂದುವನ್ನು ಅಯೋಧ್ಯೆಯಿಂದ ಉತ್ತರಕ್ಕೆ 215 ಕಿ.ಮೀ ದೂರದಲ್ಲಿ 10 ಕಿ.ಮೀ ಆಳದಲ್ಲಿ ಗುರುತಿಸಲಾಗಿದೆ.
ಈ ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.