ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಪೈಕಿ ಎರಡು ರಾಜ್ಯಗಳಲ್ಲಿ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಮಿಜೋರಾಂನಲ್ಲಿ ವಿದ್ಮುನ್ಮಾನ ಮತಯಂತ್ರ (ಇವಿಎಂ) ಕೈಕೊಟ್ಟ ಹಿನ್ನೆಲೆ ಇಂದು ಬೆಳಗ್ಗೆ ಮಿಜೋರಾಂ ಮುಖ್ಯಮಂತ್ರಿ ಮತ್ತು ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್) ಅಧ್ಯಕ್ಷ ಝೋರಾಮ್‌ಥಂಗಾ ತಮ್ಮ ಮತ ಚಲಾಯಿಸಲು ಸಾಧ್ಯವಾಗದೆ ಹಿಂದಿರುಗಿರುವ ಘಟನೆ ನಡೆಯಿತು.
ಆದರೆ ಇದೀಗ ಐಜ್ವಾಲ್ ಉತ್ತರ-II ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆಯಲ್ಲಿ ಸಿಎಂ ಮತ ಚಲಾವಣೆ ಮಾಡಿದ್ದಾರೆ ಎಂದು ವರದಿಯಾಗಿದೆ.
ಮಿಜೋರಾಂನಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಹೊರಬೀಳಿದೆ.