ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆಯಿಂದ ಕೊಂಚ ಬಿಡುವು ನೀಡಿದ್ದ ಮಳೆರಾಯ, ಮತ್ತೆ ಆರ್ಭಟಿಸಿದ್ದಾನೆ. ನಗರದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.
ನಗರದ ಮಲ್ಲೇಶ್ವರಂ, ರಾಜಾಜಿನಗರ, ವಿಧಾನಸೌಧ, ಹೆಬ್ಬಾಳ, ಶಿವಾನಂದ ಸರ್ಕಲ್, ಬನಶಂಕರಿ, ಚಾಮರಾಜಪೇಟೆ, ವಿಜಯನಗರ, ಶಾಂತಿನಗರ ಮೆಜೆಸ್ಟಿಕ್ ಸುತ್ತಮುತ್ತ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಬೈಕ್ ಸವಾರರು ಪರದಾಡುವಂತಾಗಿದ್ದು, ಫ್ಲೈ ಓವರ್ ಕೆಳಗೆ ರಕ್ಷಣೆ ಪಡೆಯುತ್ತಿದ್ದಾರೆ.
ಇನ್ನೂ ಎಲೆಕ್ಟ್ರಾನಿಕ್ ಸಿಟಿ, ಹೆಬ್ಬಾಳ, ಯಲಹಂಕ, ಮಾನ್ಯತಾ ಟೆಕ್ ಪಾರ್ಕ್, ತುಮಕೂರು ರಸ್ತೆ, ಚಾಲುಕ್ಯ ಸರ್ಕಲ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪ್ರಯಾಣಿಕರು ನಿಂತಲ್ಲೇ ನಿಲ್ಲುವ ಪರಿಸ್ಥಿತಿ ಎದುರಾಗಿದೆ. ಅಂಡರ್‌ಪಾಸ್‌ಗಳಿಗೆ ನೀರು ನುಗ್ಗಿದ್ದು, ವಾಹನಗಳ ಸಂಚಾರಕ್ಕೆ ಸಂಚಕಾರ ಉಂಟಾಗಿದೆ.
ಈಗಾಗಲೇ ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಹಲವೆಡೆ ಮರಗಳು ಧರಾಶಾಹಿಯಾಗಿದ್ದು, ತಗ್ಗುಪ್ರದೇಶಗಳಿಗೆ ನೀರು ನುಗ್ಗಿತ್ತು. ಜನ ಬಿಬಿಎಂಪಿ ಅಧಿಕಾರಿಗಳಿಗೆ ಛೀಮಾರಿ ಹಾಕಿದರು.