ಹೊಸದಿಗಂತ ಡಿಜಿಟಲ್ ಡೆಸ್ಕ್:
37ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಮಾಜಿ ವಿಶ್ವ ನಂ.1 ಆರ್ಚರಿ ಪಟು ದೀಪಿಕಾ ಕುಮಾರಿ 2 ಚಿನ್ನ, 1 ಬೆಳ್ಳಿ ಪದಕ ಗೆದ್ದಿದ್ದಾರೆ.
ಜಾರ್ಖಂಡ್ ರಾಜ್ಯವನ್ನು ಪ್ರತಿನಿಧಿಸುತ್ತಿರುವ ದೀಪಿಕಾ, ಮಹಿಳೆಯರ ವೈಯಕ್ತಿಕ ವಿಭಾಗ ಹಾಗೂ ಮೃನಾಲ್ ಚೌಹಾಣ್ ಜೊತೆ ಮಿಶ್ರ ತಂಡ ವಿಭಾಗದಲ್ಲಿ ಚಿನ್ನ ಜಯಿಸಿದರು. ಮಹಿಳೆಯರ ತಂಡ ವಿಭಾಗದಲ್ಲಿ ದೀಪಿಕಾ ಅವರನ್ನೊಳಗೊಂಡ ತಂಡ ಬೆಳ್ಳಿಗೆ ತೃಪ್ತಿಪಟ್ಟಿತು.
ಕರ್ನಾಟಕ 28 ಚಿನ್ನ, 23 ಬೆಳ್ಳಿ, 26 ಕಂಚು ಸೇರಿ ಒಟ್ಟು 77 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ 4ನೇ ಸ್ಥಾನ ಕಾಯ್ದುಕೊಂಡಿದೆ. 68 ಚಿನ್ನ, 63 ಬೆಳ್ಳಿ, 68 ಕಂಚು ಸೇರಿ ಒಟ್ಟು 199 ಪದಕ ಗೆದ್ದಿರುವ ಮಹಾರಾಷ್ಟ್ರ ಅಗ್ರಸ್ಥಾನದಲ್ಲೇ ಉಳಿದಿದೆ.