ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಕಿ ಅನಾಹುತದಿಂದ ಹತ್ತಿ ಗೋದಾಮು ಹೊತ್ತಿ ಉರಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಂಗಳವಾರ ತಡರಾತ್ರಿ ಥಾಣೆ ನಗರ ವ್ಯಾಪ್ತಿಯಲ್ಲಿ ಜರುಗಿದ ಅವಘಡದಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ.
ಬೆಂಕಿ ಹೊತ್ತಿಕೊಂಡ ಬಗ್ಗೆ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ, ಬೆಂಕಿಯನ್ನು ಹತೋಟಿಗೆ ತಂದರು.
ಹತ್ತಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವುದಕ್ಕೆ ಕಾರಣ ತಿಳಿದುಬಂದಿಲ್ಲ. ಥಾಣೆ ಪೊಲೀಸರು ಕೂಡ ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯ ಕಾರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಎರಡು ಮೃತದೇಹಗಳನ್ನು ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆಸ್ತಿ-ಆಸ್ತಿ ನಷ್ಟದ ಬಗ್ಗೆ ಇನ್ನಷ್ಟೇ ವಿವರ ತಿಳಿಯಬೇಕಿದೆ.
#WATCH | Maharashtra: Two people died after a fire broke out, late on Tuesday, at a cotton warehouse in the Bhiwandi area of Thane. Efforts to douse the fire are underway: Thane Municipal Corporation pic.twitter.com/EIshdAuiCR
— ANI (@ANI) November 7, 2023