ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯ ವಾಯು ಮಾಲಿನ್ಯ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಶಾಲೆಗಳ ರಜೆಯನ್ನು ವಿಸ್ತರಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಮಾಲಿನ್ಯದ ಮಟ್ಟ ನಿರಂತರವಾಗಿ ಹೆಚ್ಚುತ್ತಿರುವ ಕಾರಣ ಒಂದರಿಂದ 12ನೇ ತರಗತಿವರೆಗಿನ ಎಲ್ಲಾ ಶಾಲೆಗಳನ್ನು ನವೆಂಬರ್ 18 ರವರೆಗೆ ಮುಚ್ಚುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದಾರೆ. ಅದೇ ಸಮಯದಲ್ಲಿ, 6 ನೇ ತರಗತಿಯಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳನ್ನು ತೆಗೆದುಕೊಳ್ಳಲು ಅವಕಾಶ ನೀಡಲಾಗಿದೆ.
ದೆಹಲಿ ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ..ದೆಹಲಿಯಲ್ಲಿ AQI 900 ದಾಟಿದೆ. ಹಾಗಾಗಿ ದೆಹಲಿ ಸರ್ಕಾರ ನವೆಂಬರ್ 9 ರಿಂದ 18 ರವರೆಗೆ ಶಾಲೆಗಳಿಗೆ ಚಳಿಗಾಲದ ರಜೆಯನ್ನು ಘೋಷಿಸಿದೆ.
ಡಿಸೆಂಬರ್ನಲ್ಲಿ ರಜೆ ಬರುತ್ತಿತ್ತು
ದೆಹಲಿ ಶಾಲೆಗಳಿಗೆ ಸಾಮಾನ್ಯವಾಗಿ ಡಿಸೆಂಬರ್ ಮತ್ತು ಜನವರಿ ತಿಂಗಳುಗಳಲ್ಲಿ ಚಳಿಗಾಲದ ರಜೆಯನ್ನು ಘೋಷಿಸುತ್ತಿತ್ತು. ಈ ಬಾರಿ ಮಾಲಿನ್ಯ ಪ್ರಮಾಣ ಹೆಚ್ಚಾಗಿದ್ದು, ನವೆಂಬರ್ ತಿಂಗಳಲ್ಲೇ ಶಾಲೆಗಳಿಗೆ ಚಳಿಗಾಲದ ರಜೆಯನ್ನು ಘೋಷಿಸಿದೆ. ಹೊಸ ಅಧಿಸೂಚನೆಯ ಪ್ರಕಾರ, ದೆಹಲಿಯ ಎಲ್ಲಾ ಶಾಲೆಗಳು 18 ನವೆಂಬರ್ 2023 ರವರೆಗೆ ಮುಚ್ಚಲ್ಪಡುತ್ತವೆ.