ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಸಚಿವ ಹೆಚ್​ಸಿ ಮಹದೇವಪ್ಪ: ವಿವಾದದ ಬಳಿಕ ಕೊಟ್ರು ಸ್ಪಷ್ಟನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಚಿವ ಹೆಚ್‌ಸಿ ಮಹದೇವಪ್ಪ (HC Mahadevappa) ಅವರು ಅಂಗರಕ್ಷಕನಿಂದ (Bodyguard) ಶೂ (Shoe) ಹಾಕಿಸಿಕೊಂಡಿರುವ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ. ಈ ವಿಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ .

ಇದರ ಬೆನ್ನಲ್ಲೇ ಸ್ಪಷ್ಟನೆಕೊಟ್ಟ ಅವರು, ನಂಜನಗೂಡು ಉಪಚುನಾವಣೆಯಲ್ಲಿ ನನಗೆ ಸೊಂಟಕ್ಕೆ ಪೆಟ್ಟಾಗಿತ್ತು. ಒಳಗಡೆ ಕೀವಾಗಿ ಕಾಲು ಅಲುಗಾಡಿಸದಂತಾಗಿತ್ತು. ಅಂದಿನಿಂದ ಸಮಸ್ಯೆ ಇದೆ. ಹೀಗಾಗಿ ಅಂಗರಕ್ಷಕನಿಂದ ಶೂ ಹಾಕಿಸಿಕೊಂಡಿರುವುದಾಗಿ ಸಮರ್ಥನೆ ನೀಡಿದ್ದಾರೆ.

ಕುಳಿತರೆ ಬೇಗ ಏಳಲು ಆಗೋದಿಲ್ಲ, ಬಗ್ಗಲು ಕೂಡ ಸಾಧ್ಯವಾಗೋದಿಲ್ಲ. ಎಷ್ಟೋ ಜನ ಕಾಲು ಮುಂದಕ್ಕೆ ಇಟ್ಟು ನಮಸ್ಕಾರ ಮಾಡಿಸಿಕೊಳ್ಳೋರಿದ್ದಾರೆ. ಹಾಗೆ ನಾನು ಮಾಡುವವನಲ್ಲ. ನೀವು ಇದನ್ನು ಗಮನಿಸಿದ್ದು ಸಂತಸ ತಂದಿದೆ. ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿದಂತಾಗುತ್ತದೆ ಎಂದು ಹೇಳಿದರು.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಹಿಂದೆ ಮೊಣಕಾಲು ನೋವಿಗೆ ಸಿಲುಕಿ ಶಸ್ತ್ರಚಿಕಿತ್ಸೆಗೆ ಒಳಗಾದ ಸಂದರ್ಭದಿಂದ ಬಾಗುವುದು ಕಷ್ಟವಾಗಿದ್ದ ಕಾರಣ ನಮ್ಮ ಆತ್ಮೀಯ ವಲಯದಿಂದ ಸಹಾಯ ಪಡೆದಿದ್ದೇನೆ. ಬಹು ವರ್ಷಗಳ ಕಾಲ ನನ್ನೊಡನೆಯೇ ಒಂದು ಕುಟುಂಬದಂತೆ ಇರುವ ನಮ್ಮ ಕೆಲ ಸಿಬ್ಬಂದಿಗಳ ಬಳಿ ಕಾಲಿನ ಸಮಸ್ಯೆಯ ಹಿನ್ನಲೆಯಲ್ಲಿ ಪಡೆದುಕೊಂಡಿರುವ ಈ ಸಹಾಯಕ್ಕೆ ಮಾನವೀಯ ನೆಲೆ ಇದೆ ಎಂದಿದ್ದಾರೆ.

ಸಹಾಯಕ್ಕೆ ಅಂಹಕಾರ, ಅಧಿಕಾರದ ಅಮಲು ಎಂಬ ಶಬ್ದಗಳನ್ನು ಬಳಸುವುದು ಸರಿಯಾದ ಕ್ರಮವಲ್ಲ. ಇನ್ನು ನನ್ನನ್ನು ಬಲ್ಲ ಎಲ್ಲರಿಗೂ ವ್ಯಕ್ತಿ ಗೌರವಕ್ಕೆ ಸಂಬಂಧಿಸಿದ ನನ್ನ ನಿಲುವುಗಳ ಬಗ್ಗೆ ಚೆನ್ನಾಗಿಯೇ ತಿಳಿದಿರುವ ಕಾರಣ ಇಂತಹ ಸಣ್ಣಪುಟ್ಟ ವಿವಾದಗಳಿಗೆ ತಲೆ ಕೆಡಿಸಿಕೊಳ್ಳಬೇಕಿಲ್ಲ. ಸಹಾಯಕ್ಕಾಗಿ ನನ್ನ ಅಂಗರಕ್ಷಕನಿಗೆ ಧನ್ಯವಾದ ತಿಳಿಸಿದ್ದಾರೆ.

https://twitter.com/CMahadevappa/status/1722228951618335191

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!