Sunday, December 28, 2025

ಕುಡಿದ ಅಮಲಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ: ಯುವಕನ ಹುಚ್ಚಾಟಕ್ಕೆ ಹಾರಿಹೋಯ್ತು ಡೆಲಿವರಿ ಬಾಯ್ ಪ್ರಾಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಗರದಲ್ಲಿ ಅತಿವೇಗ ಮತ್ತು ಅಜಾಗರೂಕ ವಾಹನ ಚಾಲನೆ ಮತ್ತೊಂದು ಅಮಾಯಕ ಜೀವವನ್ನು ಕಿತ್ತುಕೊಂಡಿದೆ. ಹೆಚ್‌ಎಸ್‌ಆರ್ ಲೇಔಟ್‌ನ 27ನೇ ಕ್ರಾಸ್‌ನಲ್ಲಿ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಪಾದಚಾರಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಡಿಸೆಂಬರ್ 22ರಂದು ರಾತ್ರಿ ಸುಮಾರು 1 ಗಂಟೆ ವೇಳೆಗೆ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಕಾರು ಫುಟ್‌ಪಾತ್ ಬಳಿ ನಡೆದುಕೊಂಡು ಹೋಗುತ್ತಿದ್ದ ಸಂತೋಷ್ ದೊಡ್ಡಗೌಡರ್ (26) ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರು. ಅಪಘಾತದ ನಂತರ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಇತರೆ ವಾಹನಗಳಿಗೆ ಗುದ್ದಿ ಹಾನಿ ಉಂಟುಮಾಡಿದೆ. ಈ ಕಾರನ್ನು ವಿದ್ಯಾರ್ಥಿಯೊಬ್ಬ ಚಲಾಯಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:

ಮೃತ ಸಂತೋಷ್ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹೆಚ್‌ಎಸ್‌ಆರ್ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲಕ ಅಬ್ದುಲ್ ರೆಹಮಾನ್ ಅನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಮದ್ಯ ಸೇವನೆ ಶಂಕೆಯ ಹಿನ್ನೆಲೆಯಲ್ಲಿ ರಕ್ತ ಮಾದರಿ ಪರೀಕ್ಷೆಯನ್ನೂ ನಡೆಸಲಾಗಿದೆ.

error: Content is protected !!