ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸ ವರ್ಷಾಚರಣೆಗೆ ಬೆಂಗಳೂರು ನಗರ ಸಜ್ಜಾಗುತ್ತಿದ್ದ ಹೊತ್ತಲ್ಲೇ, ಬೆಂಗಳೂರನ್ನು ಕೇಂದ್ರವಾಗಿಸಿಕೊಂಡಿದ್ದ ಭಾರೀ ಡ್ರಗ್ ಜಾಲವೊಂದು ಬಯಲಾಗಿರುವುದು ಆತಂಕ ಮೂಡಿಸಿದೆ. ಮಹಾರಾಷ್ಟ್ರ ಪೊಲೀಸರ ತನಿಖೆಯಿಂದ ಹೊರಬಂದ ಈ ಪ್ರಕರಣದಲ್ಲಿ, ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂರು ಅಕ್ರಮ ಡ್ರಗ್ ತಯಾರಿಕಾ ಘಟಕಗಳನ್ನು ಪತ್ತೆಹಚ್ಚಲಾಗಿದ್ದು, ಸುಮಾರು 55 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಜಾಲದ ಸುಳಿವು ಡಿಸೆಂಬರ್ 21ರಂದು ಮುಂಬೈನಲ್ಲಿ ನಡೆದ ದಾಳಿಯಿಂದ ಸಿಕ್ಕಿದೆ. ಮಹಾರಾಷ್ಟ್ರದ ಮಾದಕ ದ್ರವ್ಯ ನಿಗ್ರಹ ದಳ ಮುಂಬೈನಲ್ಲಿ ಡ್ರಗ್ ವಶಪಡಿಸಿಕೊಂಡು ಅಬ್ದುಲ್ ಖಾದಿರ್ ಶೇಖ್ ಎಂಬಾತನನ್ನು ಬಂಧಿಸಿತ್ತು. ವಿಚಾರಣೆ ವೇಳೆ ನೀಡಿದ ಮಾಹಿತಿಯ ಆಧಾರದಲ್ಲಿ ಬೆಂಗಳೂರು ಡ್ರಗ್ ಚಟುವಟಿಕೆಗಳ ಪ್ರಮುಖ ಕೇಂದ್ರ ಎಂಬುದು ತಿಳಿದುಬಂದಿದೆ.
ಇದನ್ನೂ ಓದಿ:
ಕರ್ನಾಟಕಕ್ಕೆ ಬಂದ ಮಹಾರಾಷ್ಟ್ರ ಪೊಲೀಸರು, ಬೆಳಗಾವಿ ಮೂಲದ ಪ್ರಶಾಂತ್ ಯಲ್ಲಪ್ಪ ಪಾಟೀಲ್ ಎಂಬಾತನನ್ನು ಬಂಧಿಸಿದ್ದಾರೆ. ಆತ ಬೆಂಗಳೂರಿನಲ್ಲಿ ಮೂರು ಡ್ರಗ್ ತಯಾರಿಕಾ ಘಟಕಗಳನ್ನು ನಡೆಸುತ್ತಿದ್ದನೆಂದು ತನಿಖೆಯಿಂದ ಗೊತ್ತಾಗಿದ್ದು, ಅಲ್ಲಿ ದಾಳಿ ನಡೆಸಿದ ಪೊಲೀಸರು 55.88 ಕಿಲೋಗ್ರಾಂ ಡ್ರಗ್ ವಶಕ್ಕೆ ಪಡೆದಿದ್ದಾರೆ.

