ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಹಾಲು ಉತ್ಪಾದಕ ಸಂಘದ ರಾಯಚೂರು, ಬಳ್ಳಾರಿ ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ 63 ಹುದ್ದೆಗಳನ್ನು
ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೋಮಾ, ಬಿ.ಎಸ್ಸಿ, ಎಂ.ಎಸ್ಸಿ, ಎಂಬಿಎ, ಪದವಿ, ಬಿ.ಇ, 10ನೇ ತರಗತಿ, ಎಂಎಸ್ಡಬ್ಲ್ಯೂ, ಎಲ್ಎಲ್ಬಿ, ಸಿಎ, ಬಿ.ವಿ.ಎಸ್ಸಿ ವಿದ್ಯಾರ್ಹತೆ ಜೊತೆಗೆ ಡಿಸೆಂಬರ್ 7,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 99,600/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಡಿಸೆಂಬರ್ 7,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.