ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಬ್ಬಗಳು ಬಂತೆಂದರೆ ಖಾಸಗಿ ಬಸ್‌ಗಳ ಟಿಕೆಟ್ ದರ ಏಕಾಏಕಿ ಏರಿಕೆಯಾಗಿಬಿಡುತ್ತದೆ, ಈ ಬಾರಿ ಕೂಡ ದೀಪಾವಳಿ ಹಬ್ಬ ಹತ್ತಿರುವಿರುವ ಕಾರಣ ಖಾಸಗಿ ಬಸ್‌ಗಳ ಟಿಕೆಟ್ ದರದಲ್ಲಿ ಭಾರೀ ಏರಿಕೆಯಾಗಿದೆ.
ಬೆಲೆಯನ್ನು ಶೇ.30ರಷ್ಟು ಹೆಚ್ಚಿಸಿದ್ದು, ಹೆಚ್ಚಿನ ಬೇಡಿಕೆಯಿರುವ ಕಾರಣ ಬಸ್‌ಗಳಲ್ಲಿ ಈ ರೀತಿ ದರ ಏರಿಕೆ ಮಾಡಲಾಗುತ್ತಿದೆ. ಆದರೆ ಈ ರೀತಿ ಹೆಚ್ಚುವರಿ ಶುಲ್ಕ ವಸೂಲಿ ಮಾಡದಂತೆ ಖಾಸಗಿ ಬಸ್ ನಿರ್ವಾಹಕರಿಗೆ ಎಚ್ಚರಿಕೆ ನೀಡಲಾಗಿದೆ.
ದೀಪಾವಳಿ ಸಂದರ್ಭದಲ್ಲಿ ಸಾಲು ಸಾಲು ರಜೆಯಿದ್ದು, ಜನರು ಬೆಂಗಳೂರಿನಿಂದ ಬೇರೆ ಸ್ಥಳಗಳಿಗೆ ತೆರಳುತ್ತಿದ್ದಾರೆ. ದುಬಾರಿ ದರದ ಬಿಸಿ ಪ್ರಯಾಣಿಕರಿಗೆ ತಟ್ಟಿದ್ದು, ಈ ರೀತಿ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಇನ್ನು ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ಎರಡು ಸಾವಿರ ವಿಶೇಷ ಬಸ್‌ಗಳು ಸಂಚರಿಸಲಿವೆ.