Sunday, December 28, 2025

ಜೈಲಿನಲ್ಲಿದ್ರೂ ರಾಜಕೀಯ ಬಿಡ್ಬಾರ್ದು! ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ಬಂದು ನಾಮಪತ್ರ ಸಲ್ಲಿಸಿದ ಗ್ಯಾಂಗ್‌ಸ್ಟರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೊಮ್ಮಗನ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಗ್ಯಾಂಗ್‌ಸ್ಟರ್‌ ಬಂಡು ಆಂಡೇಕರ್ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸುವ ಮೂಲಕ ಭಾರೀ ಚರ್ಚೆಗೆ ಕಾರಣನಾಗಿದ್ದಾನೆ. ಪೊಲೀಸ್ ಭದ್ರತೆಯಲ್ಲಿ, ಮುಖಕ್ಕೆ ಕಪ್ಪು ಬಟ್ಟೆ ಮುಚ್ಚಿ ಕೈಗಳನ್ನು ಕಟ್ಟಿಕೊಂಡು ಸರ್ಕಾರಿ ಕಚೇರಿಗೆ ಕರೆತರಲಾಗಿದ್ದು, ನಿಗದಿತ ಕೇಂದ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾನೆ.

ಆಂಡೇಕರ್‌ಗೆ ಪುಣೆಯ ವಿಶೇಷ MCOCA ನ್ಯಾಯಾಲಯವು ಷರತ್ತುಬದ್ಧ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆತ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾನೆ. ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ ಆತನ ಅತ್ತಿಗೆ ಲಕ್ಷ್ಮಿ ಆಂಡೇಕರ್ ಹಾಗೂ ಸೊಸೆ ಸೋನಾಲಿ ಆಂಡೇಕರ್ ಕೂಡ ನ್ಯಾಯಾಲಯದ ಅನುಮತಿಯೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ:

ಜನವರಿ 15ರಂದು ಪುಣೆ ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ 28 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಯೆರವಡಾ ಕೇಂದ್ರ ಕಾರಾಗೃಹದಿಂದ ಪೊಲೀಸ್ ವ್ಯಾನ್‌ನಲ್ಲಿ ಆಂಡೇಕರ್‌ನನ್ನು ಭವಾನಿ ಪೇಠ್ ಪ್ರದೇಶದಲ್ಲಿರುವ ನಾಮಪತ್ರ ಸಲ್ಲಿಕೆ ಕೇಂದ್ರಕ್ಕೆ ಕರೆತರಲಾಯಿತು.

ಸೆಪ್ಟೆಂಬರ್ 5ರಂದು ನಾನಾ ಪೇಠ್‌ನಲ್ಲಿ ಆಯುಷ್ ಕೊಮ್ಕರ್ ಎಂಬ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಬಂಡು ಅಲಿಯಾಸ್ ಸೂರ್ಯಕಾಂತ್ ಆಂಡೇಕರ್ ಸೇರಿದಂತೆ ಕುಟುಂಬದ ಸದಸ್ಯರು ಮತ್ತು ಇತರರು ಸೇರಿ ಒಟ್ಟು 18 ಮಂದಿ ಆರೋಪಿಗಳಾಗಿ ಜೈಲಲ್ಲಿದ್ದಾರೆ. ಜೈಲಿನೊಳಗಿದ್ದರೂ ಚುನಾವಣಾ ರಾಜಕೀಯಕ್ಕೆ ಇಳಿದಿರುವ ಈ ಬೆಳವಣಿಗೆ ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

error: Content is protected !!