ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಶಾನ್ಯ ರಾಜ್ಯಗಳ ಮಾಜಿ ರಾಜ್ಯಪಾಲರು, ಆರ್‌ಎಸ್‌ಎಸ್ ಹಾಗೂ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾದ ಪದ್ಮನಾಭ ಬಾಲಕೃಷ್ಣ ಆಚಾರ್ಯ ಅವರು ಇಂದು ಮುಂಬೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಉಡುಪಿ ಮೂಲದವರಾದ ಬಾಲಕೃಷ್ಣ ಅವರು ಮಾರ್ಗರೆಟ್ ಆಳ್ವಾ ನಂತರ ರಾಜ್ಯಪಾಲ ಹುದ್ದೆಗೆ ಆಯ್ಕೆಯಾದ ಕರಾವಳಿ ಕರ್ನಾಟಕದ ಎರಡನೇ ಮತ್ತು ಜೆಎಸ್‌ಬಿ ಸಮುದಾಯದ ಮೊದಲಿಗರಾಗಿದ್ದರು.
ಬಾಲಕೃಷ್ಣ ಹಾಗೂ ರಾಧಾ ಆಚಾರ್ಯ ಅವರ ಪುತ್ರರಾದ ಪಿಬಿ ಆಚಾರ್ಯ ಅವರು ಉಡುಪಿಯ ಎಂಜಿಎಂ ಕಾಲೇಜಿನ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಯಾಗಿದ್ದರು.