ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಯನ್ನು ಭೇಟಿಯಾಗಲು ಮನೀಶ್ ಸಿಸೋಡಿಯಾಗೆ ಸಿಕ್ಕಿತು ಅನುಮತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ಮುಖಂಡ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಪತ್ನಿಯನ್ನು ಭೇಟಿ ಮಾಡಲು ವಿಶೇಷ ನ್ಯಾಯಾಲಯ ಶುಕ್ರವಾರ ಅನುಮತಿ ನೀಡಿದೆ.

ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಯನ್ನು ನಾಳೆ (ನವೆಂಬರ್ 11) ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಭೇಟಿಯಾಗಲು ಸಿಸೋಡಿಯಾ ಸಲ್ಲಿಸಿದ ಅರ್ಜಿಯ ಮೇರೆಗೆ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಈ ಆದೇಶವನ್ನು ಹೊರಡಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಯನ್ನು ಭೇಟಿಯಾಗಲು ಸಿಸೋಡಿಯಾ ಐದು ದಿನಗಳ ಅನುಮತಿ ಕೋರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!