ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಲಹಂಕದ ಕೋಗಿಲು ಬಡಾವಣೆಯಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಮನೆಗಳನ್ನು ತೆರವುಗಳೊಸಿದ್ದು, ಸಂತ್ರಸ್ತ ಕುಟುಂಬಗಳು ಬೀದಿಗೆ ಬಂದ ಘಟನೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಕ್ರಮವನ್ನು ಕೇರಳ ಸಿಎಂ ಪಿಣರಾಯಿ ವಿಜಯ್ ಖಂಡಿಸಿದ ಹಿನ್ನೆಲೆಯಲ್ಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸ್ಪಷ್ಟನೆ ನೀಡಿದ್ದಾರೆ.
ತಾವು ಮನೆ ತೆರವು ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಚರ್ಚಿಸಿದ್ದೇವೆ. ಸೂಕ್ಷ್ಮತೆ, ಎಚ್ಚರಿಕೆ ಮತ್ತು ಸಹಾನುಭೂತಿ ಮೆರೆದ ಕ್ರಮ ಕೈಗೊಳ್ಳಬೇಕಾಗಿತ್ತು ಎಂದು ಅವರು ಹೇಳಿದ್ದಾರೆ. ಅಲ್ಲದೆ ತಾನೇ ವೈಯಕ್ತಿಕವಾಗಿ ಸಂತ್ರಸ್ತರೊಂದಿಗೆ ಸಂಪರ್ಕ ಸಾಧಿಸಿ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.
ಇದನ್ನೂ ಓದಿ:
ಕೆ.ಸಿ. ವೇಣುಗೋಪಾಲ್ ಟ್ವೀಟ್‌ನಲ್ಲಿ, ಕುಂದುಕೊರತೆ ಪರಿಹಾರ ಮತ್ತು ಪುನರ್ವಸತಿ ವ್ಯವಸ್ಥೆ ನಿರ್ವಹಿಸುವ ಸೂಕ್ತ ಕ್ರಮಗಳನ್ನು ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಮೂಲಕ ಸಂತ್ರಸ್ತ ಕುಟುಂಬಗಳು ಬೇರೊಂದು ಸ್ಥಳದಲ್ಲಿ ಸೌಕರ್ಯ ಸಹಿತ ವಾಸಿಸಲು ಸಾಧ್ಯವಾಗಲಿದೆ.

