ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ಸಂಸದ ಸಂಗಣ್ಣ ಕರಡಿ ಹರ್ಷ

ಹೊಸದಿಗಂತ ವರದಿ,ಕೊಪ್ಪಳ:

ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಪಕ್ಷದ ವರಿಷ್ಠರು ಆಯ್ಕೆ ಮಾಡಿದಿರುವುದು ಸಂತಸವಾಗಿದೆ ಎಂದು ಸಂಸದ ಸಂಗಣ್ಣ ಕರಡಿ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ನೂತನವಾಗಿ ಆಯ್ಕೆಯಾದ ವಿಜಯೇಂದ್ರ ಅವರು ಯುವನಾಯಕರಾಗಿದ್ದು, ಪಕ್ಷ ಸಂಘಟಕರಾಗಿ ರಾಜ್ಯಾದ್ಯಂತ ಹೆಸರು ಗಳಿಸಿದ್ದಾರೆ. ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದು ಸ್ವಾಗತಾರ್ಹ. ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ 28 ಸ್ಥಾನ ಬಿಜೆಪಿ ಗೆಲ್ಲುವುದು ಖಚಿತ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!