ಹೊಸದಿಗಂತ ಡಿಜಿಟಲ್ ಡೆಸ್ಕ್:
ಟ್ರಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ.
ಗುರುಗ್ರಾಮದ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಟ್ರಕ್ ಕಾರ್‌ಗೆ ರಭಸದಲ್ಲಿ ಡಿಕ್ಕಿ ಹೊಡೆದಿದ್ದು, ಕಾರಿಗೆ ಬೆಂಕಿ ಹೊತ್ತಿದೆ. ಇದರಿಂದಾಗಿ ಕಾರ್‌ನಲ್ಲಿದ್ದ ಮೂವರು ಸುಟ್ಟು ಕರಕಲಾಗಿದ್ದಾರೆ.
ಅಪಘಾತದಲ್ಲಿ ಟ್ರಕ್ ಚಾಲಕ ಮೃತಪಟ್ಟಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಕಾರ್‌ನಲ್ಲಿದ್ದ ಮೃತದೇಹಗಳನ್ನು ಹೊರತೆಗೆದಿದ್ದು, ದೇಹಗಳು ಸಂಪೂರ್ಣ ಸುಟ್ಟಿದ್ದ ಕಾರಣ ಮೃತರ ಗುರುತು ಪತ್ತೆಯಾಗಿಲ್ಲ.