ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾರ ಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕೋಲಾರದ ಆರ್ ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.
ಸದ್ಯ ವೆಂಕಟೇಶಪ್ಪ ನಿವಾಸದ ಬಳಿ ಅಂತಿಮ ದರುಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ರಾಜಕಾರಣಿಗಳು, ಸಾರ್ವಜನಿಕರು ಅಂತಿಮ ದರುಶನ ಪಡೆಯುತ್ತಿದ್ದಾರೆ.