ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೈತ್ರಾ ಗ್ಯಾಂಗ್ನಿಂದ ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಅಭಿನವ ಹಾಲಶ್ರೀ ಸ್ವಾಮೀಜಿ ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಸೇರಿದ್ದ ಹಾಲಶ್ರೀ ಸ್ವಾಮೀಜಿಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ.
ಹಾಲಶ್ರೀ ಸ್ವಾಮೀಜಿ ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೇಸರಿ ಶಾಲು ಹಾಕಿ ಸ್ವಾಗತಿಸಿದ್ದಾರೆ.
ಉದ್ಯಮಿಗೆ ಬಿಜೆಪಿ ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ವಂಚನೆ ಮಾಡಿದ್ದ ಪ್ರಕರಣದಲ್ಲಿ ಅಭಿನವ ಹಾಲಶ್ರೀ ಜೈಲು ಸೇರಿದ್ದರು.