Sunday, December 28, 2025

ದೆಹಲಿ ಬಳಿಕ ಕೇರಳದತ್ತ ಮುಖ ಮಾಡಿದ ಸಿಎಂ: ಏನಿದರ ಒಳ ಮರ್ಮ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಪ್ರವಾಸದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್ 30ರಂದು ಕೇರಳ ಪ್ರವಾಸ ಕೈಗೊಳ್ಳುತ್ತಿರುವುದು ಕಾಂಗ್ರೆಸ್ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಈ ಭೇಟಿಯು ಕೇವಲ ಸಾಮಾಜಿಕ ಕಾರ್ಯಕ್ರಮಗಳಿಗೆ ಸೀಮಿತವಲ್ಲ, ಪಕ್ಷದ ಒಳರಾಜಕೀಯ ತಂತ್ರಗಳಿಗೂ ಸಂಬಂಧಿಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಶನಿವಾರ ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾತುಕತೆ ನಡೆಸಿದ್ದರು. ಅದರ ಬೆನ್ನಲ್ಲೇ ಕೇರಳ ಪ್ರವಾಸ ರೂಪುಗೊಂಡಿದ್ದು, ಡಿಸೆಂಬರ್ 30 ಹಾಗೂ 31ರಂದು ನಡೆಯಲಿರುವ ನಾರಾಯಣ ಧರ್ಮ ಸಂಘದ 93ನೇ ಶಿವಗಿರಿ ತೀರ್ಥೋದ್ಭವ ಸಮಾವೇಶದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಈ ಸಮಾವೇಶದಲ್ಲಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಸಿಎಂ ವೇದಿಕೆ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:

ಈ ಬೆಳವಣಿಗೆಯು ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಪವರ್ ಶೇರಿಂಗ್ ಚರ್ಚೆಗಳಿಗೆ ತಾತ್ಕಾಲಿಕ ವಿರಾಮ ನೀಡುವ ಯತ್ನವೇ ಎಂಬ ಪ್ರಶ್ನೆಗಳು ಉದ್ಭವಿಸಿವೆ. ದೆಹಲಿ ಭೇಟಿಯ ಬಳಿಕ ಸಿದ್ದರಾಮಯ್ಯ ರಾಜಕೀಯವಾಗಿ ಹೆಚ್ಚು ಸಕ್ರಿಯರಾಗಿರುವುದು ಗಮನಾರ್ಹವಾಗಿದೆ. ಒಟ್ಟಿನಲ್ಲಿ, ಕೇರಳ ಪ್ರವಾಸವು ಸಿಎಂ ಸಿದ್ದರಾಮಯ್ಯ ಅವರ ಮುಂದಿನ ರಾಜಕೀಯ ನಡೆಗಳಿಗೆ ಮಹತ್ವದ ಸೂಚಕವಾಗಬಹುದು ಎಂಬ ನಿರೀಕ್ಷೆ ರಾಜಕೀಯ ವಲಯದಲ್ಲಿ ಮೂಡಿದೆ.

error: Content is protected !!