Sunday, December 28, 2025

2026ರ ಸ್ವಾಗತಕ್ಕೆ ಬೆಂಗಳೂರು ರೆಡಿ: ಪೊಲೀಸರು ಹೈ ಅಲರ್ಟ್, ರೂಲ್ಸ್ ಮಾತ್ರ ಫಾಲೋ ಮಾಡ್ಲೇಬೇಕು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಳೆಯ ವರ್ಷಕ್ಕೆ ತೆರೆ ಎಳೆದು 2026ರ ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದೆ. ಎಂಜಿ ರೋಡ್, ಬ್ರಿಗೇಡ್ ರೋಡ್, ಕೋರಮಂಗಲ, ಇಂದಿರಾನಗರ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಭಾರೀ ಜನಸಂದಣಿ ನಿರೀಕ್ಷೆಯಿರುವ ಹಿನ್ನೆಲೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಜಾರಿಗೊಳಿಸಿದೆ.

ನಗರದ ಪಬ್‌, ಬಾರ್‌, ರೆಸ್ಟೋರೆಂಟ್‌ಗಳು ಈಗಾಗಲೇ ಫುಲ್ ಬುಕ್ ಆಗಿದ್ದು, ಯುವಜನರ ಭಾಗವಹಿಸುವಿಕೆ ಈ ಬಾರಿ ಹೆಚ್ಚಿರಲಿದೆ ಎನ್ನಲಾಗಿದೆ. ಲಕ್ಷಾಂತರ ಮಂದಿ ಆಚರಣೆಯಲ್ಲಿ ತೊಡಗುವ ಸಾಧ್ಯತೆ ಇರುವುದರಿಂದ, ಯಾವುದೇ ಅಹಿತಕರ ಘಟನೆ ನಡೆಯದಂತೆ ರಸ್ತೆ ರಸ್ತೆಗೂ ಪೊಲೀಸ್ ನಿಯೋಜನೆ ಮಾಡಲಾಗಿದೆ. ಇತ್ತೀಚೆಗೆ ದೇಶದ ಕೆಲವು ನಗರಗಳಲ್ಲಿ ನಡೆದ ಅವಘಡಗಳನ್ನು ಗಮನದಲ್ಲಿಟ್ಟುಕೊಂಡು, ಈ ಬಾರಿ ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗಿದೆ.

ಇದನ್ನೂ ಓದಿ:

ಎಂಜಿ ರೋಡ್ ಮತ್ತು ಬ್ರಿಗೇಡ್ ರೋಡ್ ಪ್ರದೇಶಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಯಂತ್ರಿಸಲಾಗಿದ್ದು, ಕ್ರೌಡ್ ಕಂಟ್ರೋಲ್‌ಗಾಗಿ ಹೋಲ್ಡಿಂಗ್ ಜೋನ್‌ಗಳನ್ನು ಸಿದ್ಧಪಡಿಸಲಾಗಿದೆ. ಪಟಾಕಿ ಸಿಡಿಸುವುದಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದ್ದು, ಪಾರ್ಟಿಗಳಿಗೆ ಮಧ್ಯರಾತ್ರಿ 1 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ.

ಸುಮಾರು 20 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ, ಡ್ರೋನ್ ಕ್ಯಾಮೆರಾ, ಸಿಸಿಟಿವಿ ಹಾಗೂ ಎಐ ಆಧಾರಿತ ನಿಗಾ ವ್ಯವಸ್ಥೆ ಮೂಲಕ ನಗರವಿಡೀ ಕಟ್ಟುನಿಟ್ಟಿನ ಮೇಲ್ವಿಚಾರಣೆ ನಡೆಯುತ್ತಿದೆ. ಡ್ರಂಕ್ ಅಂಡ್ ಡ್ರೈವ್ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಹೊಸ ವರ್ಷದ ಸಂಭ್ರಮ ಸುರಕ್ಷಿತವಾಗಿರಲು ಸಾರ್ವಜನಿಕರ ಸಹಕಾರ ಅತ್ಯವಶ್ಯಕ ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.

error: Content is protected !!