ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಗಾಗಲೇ ಚಿತ್ರರಂಗದಿಂದ ಸಾಕಷ್ಟು ನಟಿಯರು ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ನಟಿ ಮಾಧುರಿ ದೀಕ್ಷಿತ್ ರಾಜಕೀಯಕ್ಕೆ ಎಂಟ್ರಿ ಕೊಡ್ತಿದ್ದಾರೆ ಅನ್ನೋ ಸುದ್ದಿ ಎಲ್ಲೆಡೆ ಕೇಳಿಬರ್ತಿದೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಾಧುರಿ ಬಿಜೆಪಿ ಪರವಾಗಿ ಸ್ಫರ್ಧಿಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಬಿಜೆಪಿ ನಾಯಕರು ಮಾಧುರಿ ದೀಕ್ಷಿತ್ ಅವರನ್ನು ಸಂಪರ್ಕಿಸಿದ್ದು, ಸ್ಫರ್ಧಿಸೋದು ಬಹುತೇಕ ಖಚಿತ ಎನ್ನಲಾಗಿದೆ.
ಪಕ್ಷದಿಂದಾಗಲಿ, ಮಾಧುರಿ ಅವರಿಂದಾಗಲಿ ಈ ಬಗ್ಗೆ ಈವರೆಗೂ ಸ್ಪಷ್ಟನೆ ಸಿಕ್ಕಿಲ್ಲ.