ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ಟಿ20 ವಿಶ್ವಕಪ್ಗೂ ಮುನ್ನ ಟೀಂ ಇಂಡಿಯಾದ ಡ್ಯಾಶಿಂಗ್ ಓಪನರ್ ಶಫಾಲಿ ವರ್ಮಾ ಭರ್ಜರಿ ಫಾರ್ಮ್ಗೆ ಮರಳಿದ್ದಾರೆ. ಶ್ರೀಲಂಕಾ ವಿರುದ್ಧ ಇಲ್ಲಿ ನಡೆಯುತ್ತಿರುವ 4ನೇ ಟಿ20 ಪಂದ್ಯದಲ್ಲಿ ಅಕ್ಷರಶಃ ಅಬ್ಬರಿಸಿದ ಶಫಾಲಿ, ಕೇವಲ 46 ಎಸೆತಗಳಲ್ಲಿ 12 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 79 ರನ್ ಚಚ್ಚಿದ್ದಾರೆ.
ಸರಣಿಯ ಮೊದಲ ಪಂದ್ಯದಲ್ಲಿ ವೈಫಲ್ಯ ಅನುಭವಿಸಿದ್ದ (9 ರನ್) ಶಫಾಲಿ, ಆ ಬಳಿಕ ಸಿಡಿದೆದ್ದಿದ್ದಾರೆ. ಎರಡನೇ ಪಂದ್ಯದಲ್ಲಿ 69, ಮೂರನೇ ಪಂದ್ಯದಲ್ಲಿ 79 ಹಾಗೂ ಈಗ ನಾಲ್ಕನೇ ಪಂದ್ಯದಲ್ಲೂ ಅಷ್ಟೇ ಮೊತ್ತ (79) ಗಳಿಸುವ ಮೂಲಕ ಸತತ ಮೂರು ಅರ್ಧಶತಕಗಳನ್ನು ಸಿಡಿಸಿ ಸರಣಿಯಲ್ಲಿ ಅಧಿಪತ್ಯ ಸ್ಥಾಪಿಸಿದ್ದಾರೆ.
ಈ ಪಂದ್ಯದಲ್ಲಿ ಶಫಾಲಿ ವರ್ಮಾ ಮತ್ತು ಸ್ಮೃತಿ ಮಂಧಾನ ಜೋಡಿ ಲಂಕಾ ಬೌಲರ್ಗಳನ್ನು ಮನಬಂದಂತೆ ಕಾಡಿದರು. ಮೊದಲ ವಿಕೆಟ್ಗೆ ಈ ಜೋಡಿ ಬರೋಬ್ಬರಿ 162 ರನ್ಗಳ ಬೃಹತ್ ಜೊತೆಯಾಟ ನೀಡುವ ಮೂಲಕ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿತು.
ವಿಶ್ವಕಪ್ ಹೊಸ್ತಿಲಿನಲ್ಲಿರುವ ಭಾರತೀಯ ಮಹಿಳಾ ತಂಡಕ್ಕೆ ಆರಂಭಿಕ ಆಟಗಾರ್ತಿಯ ಈ ರುದ್ರಾವತಾರ ದೊಡ್ಡ ಮಟ್ಟದ ಆತ್ಮವಿಶ್ವಾಸ ತುಂಬಿದೆ.

