ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕಾಗಿ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಅತ್ಯಾಧುನಿಕ ಕ್ರಮಗಳನ್ನು ಕೈಗೊಂಡಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡ ಗೃಹ ಸಚಿವ ಜಿ. ಪರಮೇಶ್ವರ್ ಅವರು, ಈ ಬಾರಿ ತಂತ್ರಜ್ಞಾನ ಆಧಾರಿತ ಭದ್ರತೆಗೆ ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಜನದಟ್ಟಣೆಯನ್ನು ನಿಯಂತ್ರಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ನೆರವಾಗಲು ನಗರದ ಪ್ರಮುಖ ಸ್ಥಳಗಳಲ್ಲಿ ವಿಶೇಷ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಪಬ್‌ಗಳು, ಬಾರ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಮಾಲ್‌ಗಳಲ್ಲಿ ಈ ಕೋಡ್‌ಗಳನ್ನು ಅಳವಡಿಸಲಾಗುವುದು.
ಈ ಕ್ಯೂಆರ್ ಕೋಡ್‌ನಿಂದ ಏನೆಲ್ಲಾ ಲಾಭ?
ತುರ್ತು ವೈದ್ಯಕೀಯ ಸೇವೆ: ಆಂಬುಲೆನ್ಸ್ ಸೇವೆಗಳ ಬಗ್ಗೆ ತಕ್ಷಣದ ಮಾಹಿತಿ.
ಪಾರ್ಕಿಂಗ್ ಸುಲಭ: ವಾಹನ ನಿಲುಗಡೆಗೆ ಲಭ್ಯವಿರುವ ಸ್ಥಳಗಳ ವಿವರ.
ಸಂಚಾರ ಮಾಹಿತಿ: ರಸ್ತೆ ಬದಲಾವಣೆ ಹಾಗೂ ಸಂಚಾರ ದಟ್ಟಣೆಯ ಲೈವ್ ಅಪ್‌ಡೇಟ್ಸ್.
ಬೆಂಗಳೂರು ನಗರದಾದ್ಯಂತ ವ್ಯಾಪಕ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಬಹುದು ಎಂದು ಗೃಹ ಸಚಿವರು ಭರವಸೆ ನೀಡಿದ್ದಾರೆ.

