ಹೊಸದಿಗಂತ ಡಿಜಿಟಲ್ ಡೆಸ್ಕ್
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ-ಆಸ್ಟ್ರೇಲಿಯಾ ಫೈನಲ್‌ಗೆ ಲಗ್ಗೆ ಇಟ್ಟಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ಫೈನಲ್ ಪಂದ್ಯ ನಡೆಯಲಿದ್ದು, 1.30 ಲಕ್ಷ ಆಸನ ಸಾಮರ್ಥ್ಯವನ್ನು ಹೊಂದಿದೆ. ಈ ಎಲ್ಲ ಸವಾಲುಗಳನ್ನು ಮೆಟ್ಟಿ ನಿಲ್ಲುವ ಛಲವನ್ನು ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್ ಹೊಂದಿದ್ದಾರೆ.
‘ಅಭಿಮಾನಿಗಳ ಬೆಂಬಲ ನಿಸ್ಸಂಶಯವಾಗಿಯೂ ಏಕಪಕ್ಷೀಯವಾಗಿರುತ್ತದೆ ಎಂಬುದರಲ್ಲಿ ಸಂಶಯವೇ ಇಲ್ಲ. ಇಷ್ಟು ದೊಡ್ಡ ಅಭಿಮಾನಿಗಳ ಬಳಗವನ್ನು ಮೌನವಾಗಿಸುವುದರಲ್ಲಿ ಸಿಗುವ ತೃಪ್ತಿ ಬೇರೊಂದಿಲ್ಲ. ಅದುವೇ ನಮ್ಮ ಗುರಿ’ ಎಂದು ಕಮಿನ್ಸ್ ಹೇಳಿದ್ದಾರೆ.
1.30 ಲಕ್ಷ ಅಭಿಮಾನಿಗಳಿಂದ ಸ್ಟೇಡಿಯಂ ತುಂಬಿಕೊಂಡಿರಲಿದ್ದು, ಅತಿಥೇಯ ತಂಡವನ್ನು ಬೆಂಬಲಿಸಲಿದ್ದಾರೆ ಎಂಬುದರ ಅರಿವು ನಮಗಿದೆ. ಭಾರತ ತಂಡವು ಅತ್ಯುತ್ತಮ ಕ್ರಿಕೆಟ್ ಆಡುತ್ತಿದ್ದು, ಎಲ್ಲ 10 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಈ ಎಲ್ಲ ಸವಾಲುಗಳನ್ನು ಎದುರಿಸಲು ನಾವು ಸಿದ್ದರಾಗಿದ್ದೇವೆ ಎಂದು ಆತ್ಮ ಹೇಳಿದ್ದಾರೆ.