ವಿದ್ಯುತ್ ಶಾಕ್ ಗೆ ತಾಯಿ-ಮಗು ಬಲಿ ಪ್ರಕರಣ; ಮೃತ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ : ಕೆಜೆ ಜಾರ್ಜ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ಶಾಕ್‌ಗೆ ಒಬ್ಬ ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಇಂಧನ ಸಚಿವ ಕೆಜೆ ಜಾರ್ಜ್ ಅವರು ಮೃತ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ನೀಡುವುದಾಗಿ ಟ್ವೀಟ್ ಮೂಲಕ ಘೋಷಿಸಿದ್ದಾರೆ.

ಸಚಿವ ಜಾರ್ಜ್ ಟ್ವೀಟ್ ನಲ್ಲಿ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ಶಾಕ್‌ಗೆ ಒಬ್ಬ ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿರುವ ದುರ್ದೈವದ ಘಟನೆ ನಡೆದಿದೆ. ಈ ದುರದೃಷ್ಟಕರ ಸಾವುಗಳಿಗೆ ಕಾರಣವಾದ ಘಟನೆಯ ಕುರಿತು ನಾವು ವಿಚಾರಣೆ ಕೈಗೆತ್ತಿಕೊಂಡಿದ್ದೇವೆ. ಇದರ ವರದಿಯನ್ನು ಎದುರು ನೋಡುತ್ತಿದ್ದೇವೆ. ಈ ಅಪಘಾತಕ್ಕೆ ಕಾರಣರಾದ AE ಮತ್ತು AEE ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇದಕ್ಕೆ ಕಾರಣಾದವರು ಮತ್ತಾರೇ ಇದ್ದರೂ ಕ್ರಮ ಜರಗಿಸಲಾಗುವುದು. ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ ಪರಿಹಾರ ನೀಡಲಿದೆ ಎಂದು ಬರೆದುಕೊಂಡಿದ್ದಾರೆ.

https://twitter.com/thekjgeorge/status/1726179198275129698?ref_src=twsrc%5Etfw%7Ctwcamp%5Etweetembed%7Ctwterm%5E1726179198275129698%7Ctwgr%5E68c83a070d499649d69e06de3bffad57b8222d97%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadanewsnow-epaper-kanowcom%2Fhomee-updates-homee%3Fmode%3Dpwaaction%3Dclick

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!